Thursday, January 31, 2013

ಸೋಕದ ಸೂರ್ಯನ ಪ್ರೀತಿ,ಸಂಬಂಧವೆಂಬ ಮರ ಮಾತಾಡಿದಾಗ...

ಚಿತ್ರಕಲೆ : ಮದನ್ ಕುಮಾರ್
ಮಾಗಿಯ ಚಳಿಗೆ ಅವಳು ಕಂಗಾಲು.ತುಟಿಗಳು ಕೆನೆ ವ್ಯಸ್ಲಿನ್ ನೋಡದ ದಿನವೇ ಇಲ್ಲ.ಈಗೀಗ ಚರ್ಮವು ಬಿರುಕು ಬಿಡುತಿದೆ.ಅದಾಗಲೇ ಸಮಯವೂ ಜಾರಿ ಸೂರ್ಯ ನೆತ್ತಿಗೆ ಬಂದು ನಿಂತಿದ್ದಾನೆ.ಹರುಷದಿ ಇವಳು ಜಿಗಿಯುತ್ತಾ ಬಂದು ಅಂಗಳದಲ್ಲಿ ಸೂರ್ಯನಿಗೆ ಮೈವೊಡ್ಡಿ ಬಿಸಿಲ ನಿರೀಕ್ಷೆಯಲ್ಲಿ ಕುಳಿತು ಕೊಂಡಳು.ಮನೆಯ ಸುತ್ತಿದ್ದ ಮರಗಳು ಬೀಸುತ್ತಿದ್ದ ಗಾಳಿಗೆ ತಲೆದೂಗುತ್ತಿವೆ ಸೂರ್ಯ ಅವುಗಳ ಮಧ್ಯೆ ನುಸುಳಿ ಇವಳ ಮೈ ಸ್ಪರ್ಶಿಸುವಲ್ಲಿ ಎಡವುತ್ತಿದ್ದಾನೆ.ಇವಳು ಆ ಗೋಡೆಗಳೇ ಎಷ್ಟೋ ಬೆಚ್ಚನೆಯ ಭಾವ ನೀಡಿದ್ದವು ಅಂತ ಸಿಟ್ಟಾದಳು.ಅಂಗಳದೆಲ್ಲೆಡೆ ಎಡತಾಕಿದರು ಉಪಯೋಗವಾಗಲಿಲ್ಲ.ಬೀದಿಗೆ ನಿಲ್ಲಲ್ಲು ಸಾಧ್ಯವಿಲ್ಲದ ಮಾತು,ಮನೆಯ ಬೇಲಿಯು ಬಲಿಷ್ಟವೆ,ಏನಿದ್ದರು ತನ್ನ ಪರಿಮಿತಿಯಲ್ಲೇ ಎಲ್ಲವ ದಕ್ಕಿಸಿಕೊಳ್ಳಬೇಕು.ಕೋಪ ನೆತ್ತಿಗೆರುತ್ತಿದಂಗೆ ಕಣ್ಣು ಕೆಂಪಾಗಿಸಿಕೊಂಡು ಮರದ ಬಳಿ ಬಂದು ನಿಂತಳು.ಸಿಹಿ ಸಿಹಿ ನೆನಪುಗಳು ಅವಳ ಆವರಿಸಿತು.ಆಗಿನ್ನೂ ಪುಟ್ಟವಳು ಅಪ್ಪ ಗಿಡಗಳ ಅದೆಲ್ಲಿಂದಲೋ ತಂದು ನೆಟ್ಟಿದ್ದ,ದಿನ ನೀರು  ಹುಯ್ಯುತ್ತ ಅದರ ಆರೈಕೆ ಮಾಡುತ್ತಿದ್ದ.ಇವಳೋ ಅಪ್ಪನ ಮಗಳು,ಅವನು ಬಿಂದಿಗೆ ನೀರು ಸುರಿದರೆ ಇವಳು ತನ್ನ ಪುಟ್ಟ ಕೈಗಳ ತುಂಬಾ ತಂಬಿಗೆ ಹಿಡಿದು ನೀರೆರೆಯುತ್ತಿದ್ದಳು.ಆ ಗಿಡಗಳೇನು ಬೇಡಿಕೊಂಡಿರಲಿಲ್ಲ,ಅವುಗಳು ಅವಳಂತೆ ಆಗಿನ್ನೂ ಮಾತು ಕಲಿತಿರಲಿಲ್ಲ.ಅವಳು ದೊಡ್ಡವಳಾದಾಗ ಅಜ್ಜಿ ಪೂಜೆಗೆ ಮೂಲೆಯಲ್ಲಿದ್ದ ಅಲಸಿನ ಮರ ಆಯ್ದು ಕೊಂಡಿದ್ದರು.ಇವಳು ಪೂಜೆ ಮಾಡಿ ಮುಗಿಸಿದಳು.ಇವಳಿಗೆ ಮಾತು ಚೆನ್ನಾಗಿಯೇ ಹೊರುಳುತ್ತಿತ್ತು ಆದರೆ ಆಯ್ಕೆಯ ಸ್ವತಂತ್ರವಿರಲಿಲ್ಲ.ಆ ಮರವೇನು ಕೇಳಿಕೊಂಡಿರಲಿಲ್ಲ,ಅದಿನ್ನೂ ಮಾತು ಕಲಿತಿರಲಿಲ್ಲ.ತದನಂತರ ಆ ಮರ ಫಲವತ್ತಾಗಿ ಬೆಳೆದು ಅದರಲ್ಲಿ ರುಚಿಕರ ಹಣ್ಣುಗಳು ಬಿಡಲಾರಂಬಿಸಿತು.ನೋಡಿದೀರ  ನನ್ನ ಮೊಮ್ಮಗಳು ಪೂಜೆ ಮಾಡಿದ ಮರ ಅದಕ್ಕೆ ಇಷ್ಟೊಂದು ರುಚಿ ಅದರ ಹಣ್ಣುಗಳು ಎಂದು ಅಜ್ಜಿ ಹಣ್ಣು ಚಪ್ಪರಿಸಿದ್ದಾಗಲೆಲ್ಲ ಸಿಕ್ಕ ಸಿಕ್ಕವರಿಗೆ ಹೇಳಲು ಮರೆಯಲಿಲ್ಲ.ಇವಳಿಗೂ ಹಾಗೇ ಅನಿಸ ತೊಡಗಿತು ಆ ಮರ ತನ್ನ ಋಣದಲ್ಲಿದೆ ಅನ್ನೋ ದರ್ಪ ಮನೆ ಕಟ್ಟಿತ್ತು.ಚಳಿಗೆ ರೋಮ ಸೆಟೆದು ನಿಂತವು,ಸಿಟ್ಟೇರಿ ಈ ಮರವ ಇಂದು ಕಡಿದೆ ಬಿಡಬೇಕೆಂದು ಕೊಡಲಿ ಕೈಗೆತ್ತಿಕೊಂಡಳು.ಸುಡುವ ಬೇಸಿಗೆಯ ನೆನಪಾಯ್ತು,ಮರದ ತಂಗಾಳಿ ಆಗವಳಿಗೆ ಹಿತ ನೀಡುತ್ತಿದ್ದವು.ಕೊಡಲಿ ಜಾರಿತು.ಮರ ತನ್ನನ್ನು ತನಗಾಗಿ ಯಾರು ಬೆಳೆಸಲಿಲ್ಲ ಪ್ರೀತಿಸಲಿಲ್ಲವೆಂದು ಕೊನೆಗೂ ಮೌನವ ಮುರಿದು ಜೋರು ಅಳತೊಡಗಿತು.ಪರಿತಪನೆಯೋ.. ಪಶ್ಚ್ಯತಾಪವೋ...ಗೊತ್ತಾಗದಂತೆ,ಇವಳೂ  ಅಳ ತೊಡಗಿದಳು.ಸುತ್ತಲಿದ್ದ ಮರಗಳು ಸ್ಪಂದಿಸುವಂತೆ ಅಳ ತೊಡಗಿದವು.ಊರಿನೆಲ್ಲಾ ಮರಗಳು ಜೋರು ಕೂಗಲಾರಂಬಿಸಿದವು.ಅಳು ಕೂಗಾಯಿತು.ವಿವಿಧ ಭಾವಗಳು ಸೇರಿ  ಕೂಗನ್ನು ಇಂಪಾಗಿಸಿದವು.
*
ಜನರೆಲ್ಲಾ ಆ ಸಮೂಹ ಆಲಾಪನೆಯ ಆಲಿಸುವಲ್ಲಿ ಮಗ್ನರಾದರು.ಮುಂದೊಂದು ದಿನ  ಕೂಗು ಸತ್ತೊಯ್ತು.ಅವಳ,ಮರದ, ಗೋಳು ಯಾರ ಕಿವಿಗೂ ಬೀಳಲೇ ಇಲ್ಲ.

5 comments:

  1. What i liked the most is u used a female character throughout to express this!Thank god u are not one of the feminists.keep writing vaishu.

    ReplyDelete
  2. ಅಮೂರ್ತ ಭಾವವನ್ನು ಮೂರ್ತತೆಯ ಸ್ವರೂಪದಲ್ಲಿ ಕಟ್ಟಿಕೊಡುವುದು ತ್ರಾಸದ ಕೆಲಸ ವೈಶೂ. ನೀವು ಮುಕ್ಕಾಲು ಗೆಲ್ಲುವುದು ಇಲ್ಲೇ.

    ಪುಟ್ಟ ಬರಹಗಳಲ್ಲಿ ನೀವು ಅಡಗಿಸಿಡುವ ಯೋಚಿಸಲೇ ಬೇಕಾದ ವಿಚಾರಗಳ ಪಟ್ಟಿ ಯಾವತ್ತೂ ಉದ್ದವೇ.

    ಭೇಷ್...

    ReplyDelete
  3. ಕನ್ನಡ ಡಿಜಿಟಲ್ ಮೀಡಿಯ.

    https://www.vishwapriya.news

    ಉಚಿತ ಜಾಹಿರಾತಿಗಾಗಿ ನಮ್ಮ ವೆಬ್ ಸೈಟ್ ಗೆ ಭೇಟಿ ಕೊಡಿ.

    ReplyDelete
  4. ಕನ್ನಡ ಡಿಜಿಟಲ್ ಮೀಡಿಯ.
    Vishwapriya News
    ಉಚಿತ ಜಾಹಿರಾತಿಗಾಗಿ ನಮ್ಮ ವೆಬ್ ಸೈಟ್ ಗೆ ಭೇಟಿ ಕೊಡಿ.

    ReplyDelete